ಉಡುಪಿ: ಡಿ. 29 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ,ಲಿ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.