ಮುಂದಿನ 4 ದಿನ ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ/ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ ಹಾಗಾಗಿ ಮುಂದಿನ 4 ದಿನಗಳ ಕಾಲ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.

ತುರ್ತು ಸಂದರ್ಭದಲ್ಲಿ ಕರೆಗಾಗಿ: 1077 ಅಥವಾ 0820-2574802 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.