ಹುಬ್ಬಳ್ಳಿ: ಪತ್ರಕರ್ತರ ಪ್ರಶ್ನೆಗೆ ಸಿಎಂ ಯಡಿಯೂರಪ್ಪ ಸಿಡಿಮಿಡಿಗೊಂಡ ಘಟನೆ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಇಂದು ನಡೆಯಿತು.
ಸಾರಿಗೆ ನೌಕರರ ಮುಷ್ಕರ ಸಂಬಂಧಿಸಿ ಬೆಂಗಳೂರಿಗೆ ಹೋಗಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಸಿಎಂ ಹೇಳಿದರು.
ಈ ವೇಳೆ ‘ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆಯಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿಲ್ಲ, ನಾವು ನಿಗದಿ ಮಾಡಿದ ಹಣ ಮಾತ್ರ ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಿದರು. ಒಂದು ವೇಳೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕ್ರಮ ಜರುಗಿಸುತ್ತೇವೆ’ ಎಂದರು.
ವಿಮೆ ಅವಧಿ ಮುಗಿದ ಹಾಗೂ ಪರ್ಮಿಟ್ ಸಮಯ ಮುಗಿದ ಅಸುರಕ್ಷಿತ ಖಾಸಗಿ ವಾಹನಗಳನ್ನು ಕೂಡ ಓಡಿಸಲಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಕೋಪಗೊಂಡ ಮುಖ್ಯಮಂತ್ರಿ, ‘ಸರ್ಕಾರ ನಡೆಸುವುದು ಹೇಗೆ ಎನ್ನುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದರು.