HomeTrendingವೀಕೆಂಡ್ ಕರ್ಫ್ಯೂ: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌

ವೀಕೆಂಡ್ ಕರ್ಫ್ಯೂ: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌

ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ವೀಕೆಂಡ್ ಕರ್ಫ್ಯೂ ದಿನಗಳಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ

ಸೋಮವಾರದಿಂದ ಶುಕ್ರವಾರದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಈ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಶೇ. 50 ಗ್ರಾಹಕರಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ತಿಳಿಸಿದೆ.

error: Content is protected !!