ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎನ್ನುವ ಮಾತುಗಳು ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ಚರ್ಚೆಗಳು ತೀವ್ರಗೊಂಡಿವೆ. ಗುರುವಾರ ಸಂಜೆ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆದರೆ, ಪ್ರಸ್ತುತ ಸಚಿವ ಸಂಪುಟವೂ ವಿಸರ್ಜನೆಯಾಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಸೇರಿದಂತೆ ಎಲ್ಲ ಸಚಿವರು ತಮ್ಮ ಸ್ಥಾನ ಕಳೆದುಕೊಳ್ಳಲಿದ್ದು, ಹೊಸ ಮುಖ್ಯಮಂತ್ರಿ ಹೊಸ ಸಂಪುಟ ರಚನೆ ಮಾಡಬೇಕಾಗುತ್ತದೆ.
ಈ ಬೆಳವಣಿಗೆಯ ನಡುವೆ ಮುಂದಿನ ಸಚಿವ ಸಂಪುಟದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದ ನಾಯಕರಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿದೆ. ಹಾಲಿ ಸಚಿವರಾದ ಜಮೀರ್ ಅಹಮದ್ ಖಾನ್, Zameer Ahmed Khan ಮತ್ತು ರಹೀಂ ಖಾನ್ Rahim Khan ಅವರ ಮುಂದುವರಿಕೆ ಕುರಿತು ಚರ್ಚೆ ನಡೆಯುತ್ತಿದೆ.
ಇದೇ ವೇಳೆ ಸ್ಪೀಕರ್ ಆಗಿರುವ ಯು.ಟಿ ಖಾದರ್ U. T. Khader ಅವರನ್ನು ಸಚಿವ ಸಂಪುಟಕ್ಕೆ ತರಬಹುದು ಎಂಬ ಮಾತು ಕೇಳಿಬರುತ್ತಿದೆ. ಡಿ.ಕೆ. ಶಿವಕುಮಾರ್ ಬಣದಿಂದ ಎನ್ ಎ ಹ್ಯಾರಿಸ್ N. A. Haris ಅವರಿಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ. ಮೈಸೂರಿನ ಹಿರಿಯ ಶಾಸಕ ತನ್ವಿರ್ ಶೇಠ್ Tanveer Sait ಕೂಡ ಸಚಿವ ಸ್ಥಾನಕ್ಕಾಗಿ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.
ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಸಲೀಂ ಅಹ್ಮದ್ Salim Ahmed ಅವರ ಹೆಸರು ಸಹ ಸಚಿವ ಸ್ಥಾನಕ್ಕೆ ಕೇಳಿಬರುತ್ತಿದೆ. ಅಲ್ಲದೆ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ Kaneez Fatima ಅವರಿಗೂ ಅವಕಾಶ ಸಿಗಬಹುದು ಎನ್ನುವ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ.
ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Rahul Gandhi ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡುವ ಹೊಸ ಮಾದರಿಯ ಸಚಿವ ಸಂಪುಟ ಬಯಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಹಲವು ಹಿರಿಯ ಸಚಿವರನ್ನು ಕೈಬಿಟ್ಟು ಯುವ ಮುಖಗಳಿಗೆ ಆದ್ಯತೆ ನೀಡುವ ಸಾಧ್ಯತೆಗಳೂ ಚರ್ಚೆಯಲ್ಲಿವೆ.
ಮುಖ್ಯಮಂತ್ರಿ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ Yathindra Siddaramaiah ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಬಹುದೇ ಎನ್ನುವ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಒಟ್ಟಿನಲ್ಲಿ, ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಸಾಧ್ಯತೆಗಳ ಕುರಿತು ಊಹಾಪೋಹಗಳು ಹೆಚ್ಚಾಗಿದ್ದರೂ, ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲೇ ಇದೆ.

















