ವ್ಯಾಪಕ ಮಳೆ: ಮೇ.20ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇಂದು ಕೂಡ ವ್ಯಾಪಕ ಮಳೆ ಸುರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಡಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.