ಬೆಳ್ತಂಗಡಿಯನ್ನು ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಪಣ: ಹರೀಶ್ ಪೂಂಜಾ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ನಡ, ಮಡಂತ್ಯಾ ರು ಮತ್ತು ಕಲ್ಲೇರಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಹರೀಶ್ ಪೂಂಜಾ, ಕ್ಷೇತ್ರದ ಮತದಾರರು ಮೊದಲ ಬಾರಿಗೆ ಗೆಲ್ಲಿಸಿದಾಗ ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ- ಕಾಲೇಜುಗಳ ಅಭಿವೃದ್ದಿ, ಗ್ರಂಥಾಲಯ ಹಾಗೂ ಧಾರ್ಮಿಕ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯೂ ಗೆಲ್ಲಿಸಿದಲ್ಲಿ ಬೆಳ್ತಂಗಡಿಯನ್ನು ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹಿರಿಯರಾದ ಸುಬ್ರಮಣ್ಯ ಅಗರ್ತ, ಹಾಸ್ಯ ನಟರಾದ ಹಿತೆೇಶ ಪೂಜಾರಿ ಕಾಪಿನಡೆ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ
ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.