2023ರ ಏಕದಿನ ವಿಶ್ವಕಪ್‌ ಗೆ ನೆಟ್‌ನಲ್ಲಿ ಅಭ್ಯಾಸಕ್ಕಿಳಿದ ವಿಲಿಯಮ್ಸನ್

ವಿಶ್ವಕಪ್ 2023ರ ಉದ್ಘಾಟನಾ ಪಂದ್ಯವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ಅಕ್ಟೋಬರ್ 5 ರಂದು ನಡೆಯಲಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಶುಭ ಸುದ್ದಿ ಸಿಕ್ಕಂತಾಗಿದೆ. ನ್ಯೂಜಿಲೆಂಡ್ ನಾಯಕ ಬಲಗೈ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡ ಬಳಿಕ ನೆಟ್ ಅಭ್ಯಾಸ ಆರಂಭಿಸಿದ್ದಾರೆ.

ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡು ನೆಟ್ಸ್ನಲ್ಲಿ ಅಭ್ಯಾಸಕ್ಕಿಳಿಸಿದ್ದಾರೆ. ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ವಿಲಿಯಮ್ಸನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2023ರ ಐಸಿಸಿ ಏಕದಿನ ವಿಶ್ವಕಪ್‌ ಆರಂಭಕ್ಕೆ ಇನ್ನು 2 ತಿಂಗಳು ಮಾತ್ರ ಬಾಕಿ ಉಳಿದಿದೆ.

ವಿಲಿಯಮ್ಸನ್ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ವಿಶ್ವಕಪ್ ಒಳಗೆ ಸಂಪೂರ್ಣ ಫಿಟ್ ಆಗಿ ಮೈದಾನಕ್ಕೆ ಮರಳಲು ಸಾಧ್ಯವಾಗುವುದೇ ಇಲ್ಲವೇ ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ.
2023 ಐಪಿಎಲ್ನಲ್ಲಿ ಗಾಯಕ್ಕೆ ತುತ್ತಾದ ವಿಲಿಯಮ್ಸನ್: 16ನೇ ಆವೃತ್ತಿಯ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕೇನ್ ವಿಲಿಯಮ್ಸನ್ ಗಾಯಕ್ಕೆ ತುತ್ತಾದರು. 31 ಮಾರ್ಚ್ 2023 ರಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ 2023 ರ ಉದ್ಘಾಟನಾ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಮೊಣಕಾಲಿನ ಗಾಯ್ಕಕೆ ತುತ್ತಾದರು.

ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ವಿಲಿಯಮ್ಸನ್ ಸಿಕ್ಸರ್ನ್ನು ತಡೆಯಲು ಪ್ರಯತ್ನಿಸಿದಾಗ ಬಲ ಮೊಣಕಾಲಿಗೆ ಗಂಭೀರ ಗಾಯವಾಯಿತು. ಇದಾದ ನಂತರ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಋತುವಿನಿಂದ ಹೊರಗುಳಿಯಬೇಕಾಯಿತು. ಅವರು ಏಪ್ರಿಲ್‌ನಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ವಿಲಿಯಮ್ಸನ್ ಅವರ ವೈರಲ್ ವಿಡಿಯೋವನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ವಿಲಿಯಮ್ಸನ್ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ, ವಿಲಿಯಮ್ಸನ್ ಸಂಪೂರ್ಣವಾಗಿ ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ ಮತ್ತು ಎಲ್ಲಾ ರೀತಿಯ ಕ್ರಿಕೆಟ್ ಹೊಡೆತಗಳನ್ನು ಹೊಡೆಯುತ್ತಿದ್ದಾರೆ. ವಿಶ್ವಕಪ್‌ಗೂ ಮುನ್ನ ವಿಲಿಯಮ್ಸನ್‌ಗೆ ಫಿಟ್‌ ಆಗಲು ಸಾಧ್ಯವಾಗದಿದ್ದರೆ, ಅವರು ಮೆಂಟರ್‌ನ ಪಾತ್ರದಲ್ಲಿ ತಂಡದೊಂದಿಗೆ ಭಾರತಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ಇತ್ತು. ಆದರೆ ವಿಲಿಯಮ್ಸನ್ ವಿಶ್ವಕಪ್‌ನಲ್ಲಿ ಆಡುವ ಭರವಸೆಯನ್ನು ಬಿಟ್ಟುಕೊಟ್ಟಿಲ್ಲ. ವಿಶ್ವಕಪ್‌ನಲ್ಲಿ ಆಡಲು ಅವರು ಸಿದ್ಧ ಎಂಬ ಸಂದೇಶವನ್ನು ತಮ್ಮ ಕ್ರಿಕೆಟ್ ಮಂಡಳಿಗೆ ಕೊಡುತ್ತಿದ್ದಾರೆ. ಅಲ್ಲದೇ ವಿಶ್ವಕಪ್ ಹಿನ್ನೆಲೆಯಲ್ಲಿ ಅವರು ಕಠಿಣ ಪರಿಶ್ರಮದಲ್ಲಿ ನಿರತರಾಗಿದ್ದಾರೆ