ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೂತನ ಪರಿಕಲ್ಪನೆ: ತ್ರಿವರ್ಣದ ಬೆಳಕಿನ ರಂಗಲ್ಲಿ ಮಿಂದೇಳಲಿದೆ ಕನಕ ಗೋಪುರ!!

ಉಡುಪಿ: ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಆಶ್ರಯದಲ್ಲಿ ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಥಮ ಬಾರಿಗೆ ಉಡುಪಿಯ ರಥಬೀದಿಯಲ್ಲಿರುವ ಕನಕ ಗೋಪುರವು “ತ್ರಿವರ್ಣ” ಬಣ್ಣದ ಬೆಳಕಿನೊಂದಿಗೆ ಝಗಮಗಗೊಳ್ಳಲಿದೆ.

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜುಲೈ 13 ಶನಿವಾರದಂದು 6 ಗಂಟೆಗೆ ಕನಗೋಪುರದ ಎದುರು ಉದ್ಘಾಟನೆ ನಡೆಯಲಿದೆ. ಅಂದು ರಾತ್ರಿ 10 ಗಂಟೆಯವರೆಗೆ ಪ್ರದರ್ಶನ ನಡೆಯಲಿದೆ. ಜುಲೈ 14 ಭಾನುವಾರ ಸಂಜೆ 6.30 ರಿಂದ ರಾತ್ರಿ 10.00 ಗಂಟೆಯವರೆಗೆ ಜುಲೈ 15 ಸೋಮವಾರ 6.30 ರಿಂದ 10.00 ಗಂಟೆಯವರೆಗೆ

ಶಾಸಕ ರಘುಪತಿ ಭಟ್, ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಅಧ್ಯಕ್ಷ ಜನಾರ್ಧನ್ ಕೊಡವೂರು, ಗಾಂಧಿ ಆಸ್ಪತ್ರೆ ಎಂಡಿ ಡಾ. ಎಂ. ಹರಿಶ್ಚಂದ್ರ, ನಗರಸಭಾ ಸದಸ್ಯ ವಿಜಯ ಕೊಡವೂರು, ಎಸ್‌ಕೆಪಿಎ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ. ವಾಸುದೇವರಾವ್, ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಬಾಲಕೃಷ್ಣ ಮದ್ದೋಡಿ, ಕಸಾಪ, ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ, ಎಸ್‌ಕೆಪಿಎ ಉಡುಪಿ ವಲಯ ಗೌರವಾಧ್ಯಕ್ಷ ಜಯಕರ ಸುವರ್ಣ ಮುಂತಾದವರು ಉಪಸ್ಥಿತರಿರಲಿದ್ದಾರೆ.

ನಿವೃತ್ತ ಯೋಧ ಕೃಷ್ಣ ಶೆಟ್ಟಿ ಬೆಟ್ಟು ಗೌರವಾಭಿನಂದನೆ ಸಲ್ಲಿಸಲಿದ್ದಾರೆ. ಪ್ರಭಾಕರ ಸೌಂಡ್ ಸಿಸ್ಟಮ್, ಕನ್ನಡ ಸಾಹಿತ್ಯ ಪರಿಷತ್ತು, ರೋಟರಿ ಉಡುಪಿ ರಾಯಲ್, ಉಡುಪ ರತ್ನ ಪ್ರತಿಷ್ಠಾನ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಸಂಗೊಳ್ಳಿ ರಾಯಣ್ಣಅಭಿಮಾನಿ ಬಳಗ ಸಹಕರಿಸಲಿದ್ದಾರೆ.