ಮಣಿಪಾಲದಲ್ಲಿ ಅಕ್ಕನ ಮಗನಿಂದಲೇ ಮಹಿಳೆಯ ಕೊಲೆ ಯತ್ನ: ಇಬ್ಬರು ಆರೋಪಿಗಳ ಸೆರೆ

ಮಣಿಪಾಲ: ರಾತ್ರಿ ವೇಳೆ ಒಂಟಿಯಾಗಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಮಣಿಪಾಲದ ಮಂಚಿಕುಮೇರಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸ್ಥಳೀಯರು ಸೆರೆಹಿಡಿದು ಮಣಿಪಾಲ ಪೊಲೀಸರಿಗೊಪ್ಪಿಸಿದ್ದಾರೆ.

ಮಣಿಪಾಲದ ಶಿವಳ್ಳಿ ಗ್ರಾಮದ ರಮಾನಾಥ್ ರೈ ಅವರ ಪತ್ನಿ ಸುಮತಿ ರೈ ಅವರು ರಾತ್ರಿ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಮನೆಯೊಳಗೆ ಬಂದ ಸುಮತಿಯವರ ಅಕ್ಕನ ಮಗ ಮಂಗಳೂರಿನ ಮಿಥುನ್‌ ಮತ್ತು ಆತನ ಸ್ನೇಹಿತ ನಾಗೇಶ್ ಸುಮತಿಯವರ ಕೊಲೆ ಯತ್ನ‌ ಮಾಡಿದ್ದಾರೆ. ತಕ್ಷಣ ಮನೆಗೆ ಬಂದ ಗಂಡ ರಮಾನಾಥ್ ಸ್ಥಳೀಯರ ನೆರವಿನೊಂದಿಗೆ ಆರೋಪಿಗಳನ್ಬು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ‌ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.