ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ – ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: 2019-20ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಾಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಸ್ಥೆಗಳು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಪಡೆದಿರಬೇಕಾಗಿರುತ್ತದೆ. ಹಾಗೂ ಸಂಸ್ಥೆಯಲ್ಲಿ ಹೊಂದಿರುವ ಮೂಲಭೂತ ಸೌಕರ್ಯಗಳ ವಿವರ, ತರಬೇತಿ ನೀಡುವ ಚಟುವಟಿಕೆಗೆ ಸಂಬಂಧಿಸಿ ಸ್ಥಳಾವಕಾಶದ ಮಾಹಿತಿ, ಯಂತ್ರೋಪಕರಣಗಳ ವಿವರ, ಛಾಯಾಚಿತ್ರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಗಳನ್ನು ದ್ವಿ-ಪ್ರತಿಯೊಂದಿಗೆ ಸೆಪ್ಟಂಬರ್ 20 ರ ಒಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2574978 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.