ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯರ ಆಯ್ಕೆ

ಉಡುಪಿ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಉಡುಪಿ ಜಿಲ್ಲಾ ಸಮಿತಿಯು ಸೋಮವಾರದಂದು ಅಸ್ತಿತ್ವಕ್ಕೆ ಬಂದಿದ್ದು ಜಿಲ್ಲಾಧ್ಯಕ್ಷೆಯಾಗಿ ನಾಝಿಯಾ ಕನ್ನಂಗಾರ್ , ಉಪಾಧ್ಯಕ್ಷೆಯಾಗಿ ನಸೀಮಾ ಕಾಪು, ಕಾರ್ಯದರ್ಶಿಯಾಗಿ ರಹೀಮಾ ಕಾಪು, ಜೊತೆ ಕಾರ್ಯದರ್ಶಿಯಾಗಿ ಹಾಜರ, ಕೋಶಾಧಿಕಾರಿಯಾಗಿ ಲುತ್ಫಿಯಾ ಹಾಗೂ ಜಿಲ್ಲಾ ಸಮಿತಿ ಸದಸ್ಯರುಗಳಾಗಿ ನಿಹಾನ ಪರ್ವೀನ್, ಫರಾ, ಝೊಹರಾ, ರೆಹ್ಮತುನ್ನೀಸಾ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಪ್ರಸಕ್ತ ಭಾರತದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಮಹಿಳೆಯರು ರಾಜಕೀಯ ಪ್ರವೇಶ ಮಾಡಬೇಕು ಹಾಗೂ ರಾಜಕೀಯ ರಂಗದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಬೇಕು ಎಂದರು.

ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.