ಕುಂದಾಪುರ : ಡಿಸೆಂಬರ್ 15 ರಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ತುಮಕೂರು ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ ಗೀತೆ ಗಾಯನ ಸ್ಪರ್ಧೆಯ ದ್ವಿತೀಯ ಪಿಯುಸಿ ವಿಭಾಗದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ದ್ವಿತೀಯ ಸ್ಥಾನ ಪಡೆದು ಅಮೋಘ ಸಾಧನೆಗೆ ಸಾಕ್ಷಿಯಾಗಿದ್ದಾರೆ.
ರಾಜ್ಯ ಮಟ್ಟದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

















