ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಕಾರ್ಯಾಗಾರ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಇಂಟಲೆಕ್ಚುವಲ್ ಪ್ರೋಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರೆನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಜೂನ್ 19 ರಿಂದ 23 ರ
ವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುವುದು.

ನೋಂದಣಿಗೆ ಜೂನ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kasacademy.in ಅಥವಾ ದೂರವಾಣಿ ಸಂಖ್ಯೆ :080-29721550 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.