ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ, ನಾಯಕತ್ವದ ಗುಣ ಮತ್ತು ಪ್ರೇರಣೆಯ ಕುರಿತಾದ ಕಾರ್ಯಾಗಾರವು ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮೇಜರ್ ರಾಧಾಕೃಷ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಯುವ ಜನಾಂಗದಲ್ಲಿ ಶಿಸ್ತು ಬಹಳ ಮುಖ್ಯ ಹಾಗೂ ಸತತ ಪ್ರಯತ್ನದಿಂದ ಜೀವನದಲ್ಲಿ ಗೆಲುವು ಸಾಧ್ಯ ಎನ್ನುವುದನ್ನು ತಿಳಿದುಕೊಂಡರು.
ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಇಂದುರೀತಿ ಉಪಸ್ಥಿತರಿದ್ದರು.