ಕುಂದಾಪುರ: ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಟಪಾಡಿ ಹಾಗೂ ಗ್ರಾಮ ಪಂಚಾಯತ್ ಹಂದಾಡಿ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಶ್ರೀನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಮೆರವಣಿಗೆ ನಡೆಸಲಾಯಿತು. ಸ್ಥಳೀಯ ಅಂಗಡಿಗಳಿಗೆ ಹೂಗಳನ್ನು ನೀಡುವ ಮೂಲಕ ತಂಬಾಕು ಮಾರಾಟ ನಿಷೇಧದ ಬಗ್ಗೆ ಹೇಳಲಾಯಿತು.
ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶೈಲಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶೋಭಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.