ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ
ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ,
ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ ಪಿ ಎನ್.ವಿಷ್ಣುವರ್ಧನ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.