ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು, ಜೂನ್ 5 ರಂದು ಆಚರಿಸಲಾಯಿತು .

ಈ ಕಾರ್ಯಕ್ರಮದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾದ ಡಾ.ವಿದ್ಯಾ ಅಶೋಕ್, ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನಕರ್ ಶೆಟ್ಟಿ , ಕಾಲೇಜಿನ ಉಪನ್ಯಾಸಕರಾದ ಅಕ್ಷತಾ ಹಾಗೂ ಚೇತನ ಉಪಸ್ಥಿತರಿದ್ದರು. ಬಿ ಎಸ್ ಸಿ ನರ್ಸಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಕುಮಾರಿ ಭಾರತಿ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಆಡಳಿತ ವೈದ್ಯಾಧಿಕಾರಿ ಆದಂತಹ ಡಾ. ವಿದ್ಯಾ ಅಶೋಕ್ ಅವರು ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು.

ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನಕರ್ ಶೆಟ್ಟಿ , ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮತ್ತು ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯೆಂದು ತಿಳಿಸಿದರು ಮತ್ತು ಜಾಗೃತಿ ಜಾತ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕೊನೆಯಲ್ಲಿ ಬಿ ಎಸ್ ಸಿ ನರ್ಸಿಂಗ್ 5ನೇ ಸೆಮಿಸ್ಟರ್ ನ ವಿದ್ಯಾರ್ಥಿಗಳು ಪರಿಸರವನ್ನು ಸ್ವಚ್ಛ ಮಾಡುವ ಮುಖಾಂತರ ಜನರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಎಂ ಸಿ ಎನ್ ವಿದ್ಯಾರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು . ಕುಮಾರಿ ನಿಕಿತಾ ಸ್ವಾಗತಿಸಿ ಕುಮಾರಿ ದಿವ್ಯ ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಸಿನ್ಸಿ ಕಾರ್ಯಕ್ರಮವನ್ನು ನಿರೂಪಿಸಿದರು.