ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಭೂಮಿ ನಮ್ಮ ತಾಯಿ. ಆಕೆಯ ಮಕ್ಕಳು ನಾವು. ಆದರೆ ಇಂದು ಭೂಮಿ ತಾಯಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆಕೆಯನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಕಾರ್ಯದರ್ಶಿ ರೇಣುಕಾ, ಕಾರ್ಯಕಾರಣಿ ಸದಸ್ಯರಾದ ಅಶ್ವಿನಿಶೆಟ್ಟಿ, ಮಾಲತಿ, ಶೀಲಾ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶಿಲ್ಪಾವ ಕೋಟ್ಯಾನ್, ನಗರ ಕಾರ್ಯದರ್ಶಿ ದಯಶಿನಿ , ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಜಲ, ನಗರ ಮಹಿಳಾ ಮೋರ್ಚಾ ಕಾರ್ಯದರ್ಶಿ ಲೈಲಾ, ಕಡೆಕಾರು ಅಂಬಲಪಾಡಿ ಮಹಿಳಾ ಮೋರ್ಚಾದ ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ವಿನೋಧಿನಿ ಶೇಖರ್, ಕಡೆಕರ್ ಪಂಚಾಯತ್ ಸದಸ್ಯರುಗಳು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.