ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ನಿಮಿತ್ತ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಅತಿಥಿಗಳಾಗಿ ಭಾಗವಹಿಸಿದ್ದ ಉಪ ಡಿ.ವೈ.ಎಸ್.ಪಿ ವಿಜಯ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಅತೀ ಮುಖ್ಯ. ಸ್ಪಸ್ಥ ಮನಸ್ಸಿಗಾಗಿ ಜೀವನದಲ್ಲಿ ಒಳ್ಳೆಯ ದಿನಚರಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು. ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತೀ ಅವಶ್ಯ ಎಂದರು.

ಕಾಪು ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಡಿ., ಸಬ್ ಇನ್ಸ್ಪೆಕ್ಟರ್ ಗಳಾದ ಶ್ರೀಮತಿ ಮಮತಾ ಮತ್ತು ಮಾಂತೇಶ್ ಉಪಸ್ಥಿತರಿದ್ದರು.

ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಇಂದುರೀತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ರಾಮದಾಸ್ ನಾಯಕ್ ಮತ್ತು ಸಂಪತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮವನ್ನು ಸಂಯೋಜಿಸಿದರು.