ಯೋಗಕ್ಕೆ ವಿಶ್ವಮಾನ್ಯತೆ: ರಘುಪತಿ ಭಟ್

ಉಡುಪಿ: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ರಘುಪತಿ ಭಟ್ ಹೇಳಿದರು. .

ಅವರು ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಯೋಗಥಾನ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿಶ್ವಸಂಸ್ಥೆಯು ಭಾರತದ ಯೋಗ ಪದ್ದತಿಯ ಮಹತ್ವವನ್ನು ಜಗತ್ತಿಗೆ ಸಾರಲು ಜೂನ್ 21 ರಂದು ವಿಶ್ವದಾದ್ಯಂತ ವಿಶ್ವ ಯೋಗ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡುವÀ ಮೂಲಕ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ, ನಿರಂತರವಾಗಿ ಯೋಗ ಅಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಿದೆ, ಒತ್ತಡ ನಿವಾರಣೆಗೆ ಯೋಗ ಪರಿಹಾರ ನೀಡಲಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಒತ್ತಡ ಮುಕ್ತ ಮತ್ತು ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ,ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಡಿಡಿಪಿಐ ಗಣಪತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಹೆಯ ಕರ್ನಲ್ ಪ್ರಕಾಶ್, ಡಾ.ವಿನೋದ್ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 15000 ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ನೊಂದಾಯಿಸಿಕೊಂಡು ಭಾಗವಹಿಸಿದ್ದು, ಸಾರ್ವಜನಿಕರೂ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು.