ವಿಶ್ವಕಪ್ ಗೆ ಟೀಂ‌ ಇಂಡಿಯ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ

ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಋಷಬ್ ಪಂತ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ.
ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.‍ಕೆ ಪ್ರಸಾದ್ ತಂಡವನ್ನು ಪ್ರಕಟಿಸಿದ್ದು, ಅದಕ್ಕೂ ಮುನ್ನ ಆಯ್ಕೆ ಸಮಿತಿ ಸದಸ್ಯರೊಂದಿಗೆ ನಾಯಕ ವಿರಾಟ್ ಕೊಹ್ಲಿ, ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಜತೆಗೆ ಸಭೆ ನಡೆಸಲಾಗಿತ್ತು.
ತಂಡ ಇಂತಿದೆ: 
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಕೆಎಲ್ ರಾಹುಲ್, ದಿನೇಶ್ ಕಾರ್ತೀಕ್, ರವೀಂದ್ರ ಜಡೇಜಾ, ವಿಜಯ್ ಶಂಕರ್.