ಉಡುಪಿ: ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸುವ ಸಲುವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನವನ್ನು ನಗರಸಭಾ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ ಭಾರತ್ ಸೇವಾದಳದ ವತಿಯಿಂದ ಆಗಸ್ಟ್ 1 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಧ್ವಜ ಹಾಗೂ ಧ್ವಜಾರೋಹಣ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ನಗರಸಭಾ ವ್ಯಾಪ್ತಿಯ ಸಂಘ-ಸಂಸ್ಥೆಗಳ, ಸ್ವ-ಸಹಾಯ ಸಂಘಗಳ ಹಾಗೂ ನಿರಂತರ ಉಳಿತಾಯ ಗುಂಪುಗಳ ಮುಖ್ಯಸ್ಥರು ಕಡ್ಡಾಯವಾಗಿ ಭಾಗವಹಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.