ಕುಂದಾಪುರ : ಆಗಸ್ಟ್ 30 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಶ್ರೀನಿತಾ. ಎಸ್ ಕಾಮತ್ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕ , ಅಧಿತಿ 65 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.












