ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ವಿಶ್ವಪ್ರಭಾ ಪುರಸ್ಕಾರ-೨೦೨೩ ಗೆ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಆಯ್ಕೆಯಾಗಿದ್ದಾರೆ.
ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ 1 ಲಕ್ಷ ರೂ ನಗದು ಹೊಂದಿದೆ.
ಮುಂದಿನ ವರ್ಷ ಜನವರ ತಿಂಗಳಿನಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ಕಾವೂರು ರಚಿಸಿರುವ ಜೀವನ್ ರಾಮ್ ಸುಳ್ಯ ನಿರ್ದೇಶನದ ‘ಪರಶುರಾಮ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ್ ಹೆಬ್ಬಾರ್ ತಿಳಿಸಿದ್ದಾರೆ.