ನ. 29ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ

ಎಂ.ಕೆ. ರಮೇಶ್ ಆಚಾರ್ಯ

ಉಡುಪಿ: ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ ಇದರ ವತಿಯಿಂದ ಇದೇ ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

ಗಣೇಶ್ ಕೊಲೆಕಾಡಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನ ಸ್ತ್ರೀ ವೇಷಧಾರಿ ಎಂ.ಕೆ. ರಮೇಶ್ ಆಚಾರ್ಯ, ಮಂಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕವಿ ಗಣೇಶ್ ಕೊಲೆಕಾಡಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಶಶಿಕಲಾ ಪ್ರಭು ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು.

ಶಶಿಕಲಾ ಪ್ರಭು

ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯ ಅಧ್ಯಕ್ಷತೆ ವಹಿಸುವರು. ಖ್ಯಾತ ಯಕ್ಷಗಾನ ಕಲಾವಿದ ತಾರಾನಾಥ ವರ್ಕಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ವಿ.ಜಿ.ಶೆಟ್ಟಿ, ಅಲೆವೂರು ಯೋಗೀಶ್ ಆಚಾರ್ಯ, ವಿಜಯ್ ಕುಮಾರ್ ಮುದ್ರಾಡಿ, ನಿರುಪಮಾ ಪ್ರಸಾದ್ ಶೆಟ್ಟಿ, ದಿವಾಕರ ಆಚಾರ್ಯ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಟ್ರಸ್ಟಿಗಳಾದ ಕೆ.ಜೆ.ಕೃಷ್ಣ, ಕೆ.ಜೆ.ಸುಧೀಂದ್ರ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷ ನೃತ್ಯ ರೂಪಕ “ನರಕ ಚತುರ್ದಶಿ” ಪ್ರದರ್ಶನಗೊಳ್ಳಲಿದೆ ಎಂದು ಮ್ಯಾನೇಜಿಂಗ್ ಟ್ರಸ್ಟಿ ಕೆ.ಜೆ. ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.