ಮಣಿಪಾಲ: ಹೊನ್ನಾವರ ಹಡಿಬಾಳದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಚಿಟ್ಟಾಣಿಯವರ ಅಭಿಮಾನಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.