ಯಶ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಪ್ರಯತ್ನ

ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಹೊಸಕೆರೆ ಹಳ್ಳಿಯ ನಿವಾಸದ ಎದುರು ಅಭಿಮಾನಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ. ರವಿ ಎಂಬ ಅಭಿಮಾನಿ ಪೆಟ್ರೋಲ್ ಸುರಿದು ಬೆಂಕಿ ಹಂಚಿಕೊಂಡು ತೀವ್ರ ಗಾಯಗೊಂಡಿದ್ದರು. ನಂತರ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ಆ ಅಭಿಮಾನಿಯನ್ನು ನೋಡಲು ಸ್ವತಃ ಯಶ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಅಂಬರೀಶ್ ನಿಧನದ ಹಿನ್ನೆಲೆ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ಯಶ್ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ, ಇಂದು ಯಶ್ ಮನೆಯಲ್ಲಿ ಇರಲಿಲ್ಲ. ಆದರೆ ಯಶ್ ಅವರನ್ನು ನೋಡಲು ಬಂದ ಅಭಿಮಾನಿ, ತನ್ನ ಅತಿರೇಕದ ಅಭಿಮಾನಕ್ಕೆ ಸೋತಿದ್ದಾರೆ ಎಂದು ತಿಳಿದುಬಂದಿದೆ.