ಬಿಜೆಪಿ ನಾಯಕ ಯಶ್ಪಾಲ್ ಸುವರ್ಣ ಅವರಿಗೆ ಮಾರಿಗುಡಿ ಪೇಜ್ ಎಂಬ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಬಜ್ಪೆ ನಿವಾಸಿ ಮಹಮ್ಮದ್ ಶಫಿ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದು, ಬಳಿಕ ಈ ಕುರಿತು ವಿವಿಧ ಸಂಘಟನೆಗಳಿಂದ ಪೊಲೀಸರಿಗೆ ಪ್ರತ್ಯೇಕ ದೂರು ಕೂಡ ನೀಡಲಾಗಿತ್ತು.