udupixpress
Home Trending ಎಡನೀರು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕಾರ

ಎಡನೀರು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕಾರ

ಕಾಸರಗೋಡು: ಸುಮಾರು 1300ಕ್ಕೂ ಅಧಿಕ ವರ್ಷಗಳ ಸುದೀರ್ಘ ಇತಿಹಾಸ ಇರುವ ದೇಶದ ಪ್ರಾಚೀನ ಗುರುಪೀಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ತೋಟಕಾಚಾರ್ಯ ಪರಂಪರೆಯ ಶ್ರೀ ಎಡನೀರು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರು (ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು) ಸೋಮವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು.

ಎಡನೀರು ಮಠದ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ಉತ್ತರಾಧಿಕಾರಿಯಾಗಿ ಅವರು ಪೀಠಾರೋಹಣಗೈದರು.

ತಮಿಳುನಾಡಿನ ಕಾಂಚಿ ಕಾಮಕೋಟಿ ಸನ್ನಿಧಿಯಲ್ಲಿ ಸೋಮವಾರ ಮುಂಜಾನೆ ಕಾಂಚಿ ಕಾಮಕೋಟಿಯ ಪೀಠಾಧಿಪತಿಗಳಾದ ಶ್ರೀ ವಿಜಯೇಂದ್ರ ಸರಸ್ವತೀ ಮಹಾಸ್ವಾಮಿಗಳು ಶ್ರೀ ಜಯರಾಮ ಮಂಜತ್ತಾಯರಿಗೆ ಸನ್ಯಾಸ ದೀಕ್ಷೆ ನೀಡಿದರು.

error: Content is protected !!