ಯಡಿಯೂರಪ್ಪ ಜಾಸ್ತಿ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲ್ಲ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ‌ಗೆ ಬೇಸರತಂದಿದೆ. ಹಾಗಾಗಿ ಯಡಿಯೂರಪ್ಪನವರು ಜಾಸ್ತಿ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲ್ಲ. ಸಿಎಂ ಬದಲಾವಣೆ ಕುರಿತು ಸ್ವತಃ ಪ್ರಧಾನಿ ಮೋದಿ ಅವರೇ ಸುಳಿವು ನೀಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದವರೇ ನೂರು ಬಿಜೆಪಿ ಶಾಸಕರು ಇದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಉತ್ತರಕರ್ನಾಟಕದವರೇ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.

ಯಡಿಯೂರಪ್ಪ ಇಡೀ ಕರ್ನಾಟಕಕ್ಕೆ ಮುಖ್ಯಮಂತ್ರಿ. ಕೇವಲ ಶಿವಮೊಗ್ಗಕ್ಕೆ ಮಾತ್ರ ಸಿಎಂ ಅಲ್ಲ. ಆದರೆ ಅವರು ಶಿವಮೊಗ್ಗ ಜಿಲ್ಲೆಗೆ ಮಾತ್ರ ಸಿಎಂ ಅನ್ನೋ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಿಎಂ ಎಲ್ಲ ಅನುದಾನವನ್ನು ಶಿವಮೊಗ್ಗಕ್ಕೆ ಮೀಸಲಿಡುತ್ತಿದ್ದಾರೆ. ಅನುದಾನ ವಿಚಾರದಲ್ಲಿ ಸಿಎಂ ತಾರತಮ್ಯ ಮಾಡುತ್ತಿದ್ದಾರೆ. ಆದ್ದರಿಂದ ಅನುದಾನ ವಿಚಾರದಲ್ಲಿ ನಾನು ಮತ್ತು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಜಗಳ ಮಾಡಿದ್ದೇವೆ ಎಂದರು.