ರಾಜ್ಯದ ಏಳು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ; ನ.13ರ ನಂತರ ಮಳೆ ತಗ್ಗುವ ಮುನ್ಸೂಚನೆ

ಬೆಂಗಳೂರು: ತಮಿಳುನಾಡು ಹಾಗೂ ಆಂಧ್ರ ಪ್ರದೇಶ ಕರಾವಳಿಗಳಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪ್ರಬಲತೆ ತಗ್ಗಿರುವುದರಿಂದ ರಾಜ್ಯದಲ್ಲಿ ನ.13ರಿಂದ ಮಳೆ ತಗ್ಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ನ.15ರವರೆಗೆ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಮಳೆಯಾಗುವ ಸೂಚನೆಗಳಿಲ್ಲ. ಆದರೆ, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.