ಹಿರಿಯಡ್ಕ: ಎಂಕುಲ್ ಫ್ರೆಂಡ್ಸ್ ಕಲಾವಿದರು(ರಿ.) ಹಿರಿಯಡ್ಕ ಇವರ ಆಶ್ರಯದಲ್ಲಿ 4ನೇ ವರ್ಷದ ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟವು ದಿನಾಂಕ 22-12-2018 ರಿಂದ 23-12-2018 ರ ವರೆಗೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜುನ ಮೈದಾನದಲ್ಲಿ ನಡೆಯಲಿದೆ.
ಶನಿವಾರ ಪೂರ್ವಾಹ್ನ10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಸಮಾಜದ ಹಲವು ಗಣ್ಯರು ಉಪಸ್ಥಿತರಿರುವರು. 23 ರಂದು ಸಂಜೆ 6ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭವು ನಡೆಯಲಿದೆ.