ಕಟಪಾಡಿ : ದಿನಾಂಕ 21 ಜೂನ್ ಬುಧವಾರದಂದು ‘ವಿಶ್ವ ಯೋಗ ದಿನಾಚರಣೆ’ ಯ ಪ್ರಯುಕ್ತ ಕಟಪಾಡಿಯ ಎಸ್.ವಿ.ಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರಾತ್ಯಕ್ಷಿಕೆ ನಡೆಯಿತು. ಎಸ್.ವಿ.ಎಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಜೀವನದಲ್ಲಿ ಆರೋಗ್ಯವಂತರಾಗಿರಲು ಯೋಗಾಭ್ಯಾಸದ ಮಹತ್ವ ಏನು ಎಂಬುದನ್ನು ತಿಳಿದುಕೊಂಡರು.
ಕಾರ್ಯಕ್ರಮದಲ್ಲಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕರಾದ ಸತ್ಯೇಂದ್ರ ಪೈ, ಎಸ್.ವಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಜೊತೆಗೆ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.












