ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100, 0820-2526444 ಅನ್ನು ಸಂಪರ್ಕಿಸುವಂತೆ
ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.