ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದನು. ಪಾತಿಮಾ ಅವರು ಮಲಗಿದ್ದ ವೇಳೆ, ಮನೆಯ ಹಿಂಬಾಗಿಲನ್ನು ಒಡೆದು ಒಳನುಗ್ಗಿ, ಮನೆಯಲ್ಲಿದ್ದ ಗೋದ್ರೇಜ್ ಅಲಮಾರಿಯನ್ನು ತೆರೆದು ಹುಡುಕಾಡುತ್ತಿದ್ದನು. ಈ ವೇಳೆ ಪಾತಿಮಾ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಕುರಿತು ಪಾತಿಮಾ ಅವರು ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ವೇಳೆ, ಆರೋಪಿಯು ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್ ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ.ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















