ಪಾಳುಬಿದ್ದ ಕಟ್ಟಡವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಮೂಡುಬಿದಿರೆ: ಪಾಳುಬಿದ್ದ ಕಟ್ಟಡವೊಂದರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಅಳಿಯೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ಸಂಜೆ ನಾಲ್ಕು ಗಂಟೆ ಸುಮಾರಿಗೆ ಮನೆಗೆ ಬಂದಿದ್ದ. ಬಳಿಕ ಹೊರಗೆ ಹೋಗಿ ಬರುವುದಾಗಿ ತಿಳಿಸಿ ಹೋದವನು ಕತ್ತಲಾದರೂ ಮನೆಗೆ ಬಂದಿರಲಿಲ್ಲ.

ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಆಗ ಮನೆಯವರು ಸುತ್ತಮುತ್ತ ಹುಡುಕಾಟ ನಡೆಸಿದ್ದು, ಪಾಳುಬಿದ್ದ ಕಟ್ಟಡದಲ್ಲಿ ಸಂದೀಪ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.