ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ಯುವಕ ನೇಣಿಗೆ ಶರಣು

ಕೋಟ: ದೇವಸ್ಥಾನದೊಳಗೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ತೆಕ್ಕಟ್ಟೆ ಮಹಾಲಿಂಗೇಶ್ವರ
ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ) ಎಂದು ಗುರುತಿಸಲಾಗಿದೆ. ಈತ ಪ್ರತಿದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದು, ದೇಗುಲದ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಚಂದ್ರ ಪೂಜಾರಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಚಂದ್ರ ಪೂಜಾರಿ ದೇವಸ್ಥಾನದ ಬಾವಿಯ ಹಗ್ಗವನ್ನು ಗುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ದೇಗುಲಕ್ಕೆ ಕಸ ಗುಡಿಸುವ ಕೆಲಸಗಾರರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.