ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋದ ಯುವಕ

ಉಡುಪಿ:  ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆಯೂ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ಹೋದ ಯುವಕ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋದ ಘಟನೆ ವರದಿಯಾಗಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.  ಯುವಕನ ದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.