ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲವಾರು ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಯುವಕ.!

ಮೂಡುಬಿದಿರೆ: ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಮಾರಕಾಯುಧ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಶನಿವಾರ ನಡೆದಿದೆ.

ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತೆರಳಿದ ಆರೋಪಿ, ಅಲ್ಲಿದ್ದ ಯುವಕರಿಗೆ ಮಾರಕಾಯುಧ ಬೀಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ ಎನ್ನಲಾಗಿದೆ.

ಮೊಬೈಲ್ ನೀಡಲು ನಿರಾಕರಿಸಿದ ವೇಳೆ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾದರು.

ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ.