ರಸ್ತೆ ದಾಟುತ್ತಿರುವಾಗ ಕಾರು ಡಿಕ್ಕಿ ಹೊಡೆದು ಬಾಲಕ ಮೃತ್ಯು

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಉಳ್ಳಾಲ ಬೈಪಾಸ್ ಹೆದ್ದಾರಿಯಲ್ಲಿ ನಡೆದಿದೆ.

ಉಳ್ಳಾಲದ ನಿವಾಸಿ ಬಶೀರ್ ಅಹ್ಮದ್ ಅವರ ಪುತ್ರ ಅಯಾನ್ ಮೃತಪಟ್ಟ ಬಾಲಕ. ಈತ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವಾಗ ರಿಡ್ಜ್ ಕಾರು ಬಂದು ಆತನಿಗೆ ಡಿಕ್ಕಿ ಹೊಡೆದಿದೆ.

ಅದರ ಪರಿಣಾಮ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.