ವಿಟ್ಲ: ಇಲ್ಲಿನ ಕೇಪು ಕುಕ್ಕೆಬೆಟ್ಟು ಎಂಬಲ್ಲಿ ಟೆರೇಸ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ಕೊತ್ತಲಮಜಲು ನಿವಾಸಿ ದಿ. ವಿಶ್ವನಾಥ ಆಚಾರ್ಯ ಅವರ ಪುತ್ರ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ಈತ ಕುಕ್ಕೆಬೆಟ್ಟುವಿನ ಸಂಬಂಧಿಕಯೊಬ್ಬರ ಮನೆಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದನು.
ನಿನ್ನೆ ತಡರಾತ್ರಿ ಮನೆಯ ಟೆರೇಸ್ ಮೇಲೆ ಫೋನ್ ನಲ್ಲಿ ಮಾತನಾಡುತ್ತಿದ್ದು, ಈ ವೇಳೆ ಏಕಾಏಕಿಯಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಪ್ರಸಾದ್ ಸಾವನ್ನಪ್ಪಿದ್ದಾನೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಸಾದ್, ತಾಯಿ ಹಾಗೂ ನಾಲ್ಕು ಸಹೋದರಿಯರನ್ನು ಅಗಲಿದ್ದಾನೆ.












