ಕುಂದಾಪುರ : ಡಿಸೆಂಬರ್ 09 ರಂದು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
















