ಆ. 14ರಂದು ಕಾಪು ಬಿಜೆಪಿ ಯುವಮೋರ್ಚಾದಿಂದ ‘ಯುವ ತಿರಂಗ ಯಾತ್ರೆ’

ಕಾಪು: ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಯುವ ತಿರಂಗ ಯಾತ್ರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಯಾತ್ರೆಯ ಪ್ರಯುಕ್ತ ಆ.14ರಂದು ಬೆಳಿಗ್ಗೆ 7 ಗಂಟೆಗೆ ಕಟಪಾಡಿ ಜಂಕ್ಷನ್ ನಿಂದ ಕಾಪು ಪೇಟೆ ಮಾರ್ಗವಾಗಿ ಕಟಪಾಡಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ‘ಸೈಕಲ್ ಜಾಥಾ’ ಕಾರ್ಯಕ್ರಮ ನಡೆಯಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ನೂರಾರು ಸಂಖ್ಯೆಯಲ್ಲಿ ಜನರು ಈ ಜಾಥಾದಲ್ಲಿ ಭಾಗವಹಿಸುವರು.

ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ರಾಷ್ಟೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ತಿಳಿಸಿದ್ದಾರೆ.