ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಇದರ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಇಂದು ಯುವ ತಿರಂಗಾ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರು ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಅವರಿಗೆ ರಾಷ್ಟ್ರ ಧ್ವಜ ಹಸ್ತಾಂತರಿಸುವ ಮೂಲಕ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.
ಕಟಪಾಡಿಯಿಂದ ಕಾಪು ಪೇಟೆಗೆ ತೆರಳಿ ಅಲ್ಲಿಂದ ಕಟಪಾಡಿ ವೆಂಕಟರಮಣ ದೇವಸ್ಥಾನದವರೆಗೆ ಸೈಕಲ್ ಜಾಥಾ ನಡೆಸಲಾಯಿತು. ಸುಮಾರು 40 ಕ್ಕೂ ಅಧಿಕ ಕಾರ್ಯಕರ್ತರು ಸೈಕಲ್ ಜಾಥಾದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ.
ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಾದ ವಿಜೇತ್ ಬೆಳ್ಳರ್ಪಾಡಿ, ಸಚಿನ್ ಬೊಳ್ಜೆ, ಸತೀಶ್ ಪೂಜಾರಿ, ಅಭಿರಾಜ್ ಸುವರ್ಣ, ಪ್ರವೀಣ್ ಪೂಜಾರಿ, ಮಂಡಲ ಯುವಮೋರ್ಚಾದ ಪದಾಧಿಕಾರಿಗಳಾದ ರಾಘವೇಂದ್ರ ಮಾಂಬೆಟ್ಟು, ಪ್ರವೀಣ್ ಅಡ್ವೆ, ಸೋನು ಪಾಂಗಳ, ಪ್ರಮುಖರಾದ ರವಿ ಕೋಟ್ಯಾನ್, ದಿಲೀಪ್, ನಿತಿನ್ ಸೇರಿಗಾರ್, ಸುಭಾಶ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.