ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದ
ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ನಗರದ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಹಾಗೂ ಜಾನಪದ ಹಾಡು (ಗುಂಪು ಸ್ಪರ್ಧೆ), ಏಕಾಂಕ ನಾಟಕ (ಹಿಂದಿ, ಇಂಗ್ಲೀಷ್, ಕನ್ನಡ- ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ, ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ ಹಾಗೂ ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕಥಕ್ ಹಾಗೂ ಕೂಚುಪುಡಿ, ಕನ್ನಡ, ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಆಶುಭಾಷಣ (ವೈಯಕ್ತಿಕ) ಸ್ಪರ್ಧೆಗಳನ್ನು ನಡೆಸಲಾಗುವುದು.
15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಸ್ಪರ್ಧಿಗಳು ವಯಸ್ಸಿನ ದೃಢೀಕರಣ ಪತ್ರ (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಜನನ ಪ್ರಮಾಣಪತ್ರದ ಪ್ರತಿ) ವನ್ನು ಹಾಜರುಪಡಿಸಬೇಕು.
ಸ್ಪರ್ಧಾಳುಗಳು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ :0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.