ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ, ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ತೇರ್ಗಡೆ ಹೊಂದಿರುವ, 21 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 22 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ [email protected] ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಅಥವಾ ಯುವ ಸ್ಪಂದನ ಕೇಂದ್ರ, ದೂರವಾಣಿ ಸಂಖ್ಯೆ 0820-2533933 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.