ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರು ಏ.3ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಮಣಿಪಾಲ ರಜತಾದ್ರಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮೈಸೂರು ಡಿವಿಜನ್ ಉಸ್ತುವಾರಿಗಳು ರೋಝಿ ಜಾನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ, ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ, ಉಡುಪಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಗಫೂರ್, ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ಹಾಗೂ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ ಭಾಗವಹಿಸಲಿದ್ದಾರೆ.
ಬೆಳಗ್ಗೆ ಗಂಟೆ 9.00ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದು ಆ ನಂತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು.
ಈ ಕಾರ್ಯಕ್ರಮಕ್ಕೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಕಾಂಗ್ರೆಸ್ ಕಾರ್ಯಕರ್ತರು, ಎಲ್ಲಾ ಕಾಂಗ್ರೆಸ್ ಬಂಧುಗಳು ಹಾಗೂ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅಭಿಮಾನಿಗಳು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಬೆಳಿಗ್ಗೆ 9:00ಕ್ಕೆ ಉಡುಪಿ ಬ್ರಹ್ಮಗಿರಿ ಬಳಿಯಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಪಸ್ಥಿತರಿರ ಬೇಕೆಂದು ನೂತನವಾಗಿ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.