ಇಂದು (ಜುಲೈ 31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31 (ಬುಧವಾರ) ರಂದು ರಜೆ ಘೋಷಿಸಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.