ಉಚ್ಚಿಲ ದಸರಾ ಮಹೋತ್ಸವ- ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ.

ಉಡುಪಿ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಹಮ್ಮಿಕೊಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯನ್ನು ನಾಡೋಜ ಡಾ.ಜಿ.ಶಂಕರ್ ಪುತ್ರಿ ಶ್ಯಾಮಿಲಿ ನವೀನ್ ಮತ್ತು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಉದ್ಘಾಟಿಸಿದರು.

ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ದೇಹದಾರ್ಡ್ಯಪಟು ನಿತ್ಯಾನಂದ ಡಿ. ಕೋಟ್ಯಾನ್ ಬಡಾನಿಡಿಯೂರು ತೊಟ್ಟಂ ಪ್ರದರ್ಶನ ನೀಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಲಾಯಿತು.

Oplus_131072

ಈ ಸಂದರ್ಭ ಮಾತನಾಡಿದ ಜಯ ಸಿ.ಕೋಟ್ಯಾನ್, ನಾಡಿಗೇ ಮಾದರಿಯಾಗಿ ಉಚ್ಚಿಲ ದಸರಾ ಆಯೋಜನೆಗೊಂಡಿದೆ. ಪ್ರತೀ ವರ್ಷ ಭಕ್ತಾದಿಗಳ ಸಂಖ್ಯೆ ಅಧಿ ಕವಾಗುತ್ತಿದ್ದು ಮಹೋತ್ಸವದ ಉತ್ಕೃಷ್ಟತೆಯನ್ನು ಬಿಂಬಿಸುತ್ತದೆ ಎಂದರು. ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾ‌ರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ವಿಶ್ವೇಶ್ವರ, ಅರುಣ್ ಕುಮಾರ್, ಜೇಸನ್ ಡಯಾಸ್, ಅಶೋಕ್ ಶೆಟ್ಟಿ ಆನಂದ ಹೊಸಬೆಟ್ಟು ಪುಂಡಲೀಕ ಹೊಸಬೆಟ್ಟು ವಿಜಯ ಸುವರ್ಣ ಬೇಂಗ್ರೆ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭ ನಿತ್ಯಾನಂದ ಡಿ. ಕೋಟ್ಯಾನ್‌ರನ್ನು ಸನ್ಮಾನಿಸಲಾಯಿತು. ಸತೀಶ್ ಅಮೀನ್ ಪಡುಕರೆ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು.